ಬಾಗಲಕೋಟೆ ತಾಲೂಕಿನ ಸೀಮಿಕೇರಿ ಬೈಪಾಸ್‌ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಹನುಮ ಜಯಂತಿ ಮೆರವಣಿಗೆ ವೀಕ್ಷಿಸಲು ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಕಲಾದಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.ಎಡಗಡೆಯಿಂದ ಓವರ್ ಟೇಕ್ ಮಾಡಲು ಹೋಗಿ ಬಾಲಕರ ಯಡವಟ್ಟು ಮಾಡಿಕೊಂಡಿದ್ದಾರೆ. ರಸ್ತೆ ಬದಿ ಐವರು ಯುವಕರು ಹೊರಟಿದ್ದರು. ಅವರಿಗೆ ಡಿಕ್ಕಿ ಹೊಡೆದು ಬೈಕ್ ಪಲ್ಟಿ ಆಗಿದ್ದು, ನೇರವಾಗಿ ಕ್ಯಾಂಟರ್ ಅಡಿಗೆ ಸಿಲುಕಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

