Breaking News

ಕಾಸರಗೋಡು : ಯುವತಿಯ ಮೇಲೆ ಆಸಿಡ್ ದಾಳಿ ನಡೆಸಿ ಯುವಕ ಆತ್ಮಹತ್ಯೆಗೆ ಶರಣು!!

ಚಿತ್ತಾರಿಕ್ಕಲ್ ನ ಕಂಬಳ್ಳೂರಿನಲ್ಲಿ ಯುವತಿಯ ಮೇಲೆ ಆಸಿಡ್ ದಾಳಿ ನಡೆದಿದೆ. ಕಂಬಳ್ಳೂರಿನಲ್ಲಿ ಫ್ಯಾನ್ಸಿ ಅಂಗಡಿ ನಡೆಸುತ್ತಿರುವ ಸಿಂಧು ಮೋಲ್ (34) ದಾಳಿಗೆ ಬಲಿಯಾದವರು. ಕಂಬಳ್ಳೂರು ಮೂಲದ ರತೀಶ್, ಅಂಗಡಿಯಲ್ಲಿ ಕುಳಿತಿದ್ದ ಸಿಂಧು ಅವರ ದೇಹದ ಮೇಲೆ ಆಸಿಡ್ ಸುರಿದಿದ್ದಾನೆ.ನಂತರ ಆತ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎನ್ನಲಾಗಿದೆ. ಘಟನೆಯ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.ರತೀಶ್ ಮತ್ತು ಸಿಂಧು ನೆರೆಹೊರೆಯವರಾಗಿದ್ದು ಆಪ್ತ ಸ್ನೇಹಿತರಾಗಿದ್ದರು ಎಂದು ಹೇಳಲಾಗಿದೆ. ಯಾವುದೋ ಕಾರಣಕ್ಕೆ ಅವರ ನಡುವೆ ಭಿನ್ನಾಭಿಪ್ರಾಯ ಉಂಟಾಗಿತ್ತು ಎಂದು ಪೊಲೀಸ್ ವರದಿಗಳು ಹೇಳಿವೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *