Breaking News

ದೆಹಲಿ :ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಪ್ರಧಾನಿ ಮೋದಿ ಸೂಚನೆ!!

ಆಪರೇಷನ್‌ ಸಿಂದೂರದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ವಿವಿಧ ಸಚಿವಾಲಯ ಮತ್ತು ಇಲಾಖೆಗಳ ಕಾರ್ಯದರ್ಶಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ್ದು, ‘ಸದಾ ಎಚ್ಚರದಿಂದಿದ್ದು, ಸ್ಪಷ್ಟ ಸಂವಹನವನ್ನು ಮುಂದುವರೆಸಿ’ ಎಂದು ಸೂಚಿಸಿದ್ದಾರೆ.ದೇಶವು ಸೂಕ್ಷ್ಮ ಪರಿಸ್ಥಿತಿಯಲ್ಲಿರುವ ಈ ಸಮಯದಲ್ಲಿ ಜಾಗರೂಕತೆ, ಸಂಸ್ಥೆಗಳ ನಡುವಿನ ಸಮನ್ವಯ ಮತ್ತು ಸ್ಪಷ್ಟ ಸಂವಹನಕ್ಕೆ ಪ್ರಧಾನಿ ಮೋದಿ ಕರೆ ನೀಡಿದ್ದಾರೆ. ರಾಷ್ಟ್ರೀಯ ಭದ್ರತೆ, ಕಾರ್ಯಾಚರಣೆಯ ಸನ್ನದ್ಧತೆ ಮತ್ತು ನಾಗರಿಕ ಸುರಕ್ಷತೆಗೆ ಸರ್ಕಾರದ ಬದ್ಧತೆಯನ್ನು ಅವರು ಪುನರುಚ್ಚರಿಸಿದರು.ಪಹಲ್ಗಾಂ ನರಮೇಧಕ್ಕೆ ಪ್ರತೀಕಾರವಾಗಿ ಭಾರತ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ಭಾರತೀಯರು ಸಂಭ್ರಮಿಸಿದ್ದು, ಜಾಲತಾಣಗಳಲ್ಲಿ ದೇಶ ಭಕ್ತಿಯ ಸಂದೇಶಗಳು ತುಂಬಿ ಹೋಗಿದ್ದು, ನೆಟ್ಟಿಗರು ‘ಜೈ ಹಿಂದ್‌’, ‘ನಾರಿ ಶಕ್ತಿ’ ಎನ್ನುತ್ತಾ ಸೇನೆಯನ್ನು ಕೊಂಡಾಡುತ್ತಿದ್ದಾರೆ. ಕೆಲವರು ‘ ನ್ಯಾಯ ನೆರವೇರಿದೆ ಜೈ ಹಿಂದ್‌’ ಎಂದು ಸಂಭ್ರಮಿಸಿದ್ದಾರೆ.

Share News

About BigTv News

Check Also

ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು, ಪತ್ನಿಯ ಎದುರಲ್ಲೇ ಅಮಾನುಷವಾಗಿ ಪತಿಯ ಜೀವ ತೆಗೆದ ರಾಕ್ಷಸರು

ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಎದುರು ಯಾಸೀನ್ ಠಕ್ಕೆ ಎಂಬಾತನ ಮೇಲೆ ದುಷ್ಕರ್ಮಿಗಳು ಎರಡು ಸುತ್ತು ಗುಂಡು ಹಾರಿಸಿ ಹತ್ಯೆ …

Leave a Reply

Your email address will not be published. Required fields are marked *