Breaking News

ಭಾರತೀಯ ಸೈನಿಕರ ಶ್ರೇಯಸ್ಸಿಗಾಗಿ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ: ಜಮೀರ್ ಅಹಮದ್ ಖಾನ್

ಪೆಹಲ್ಗಮ್ ದಾಳಿ ಹಿನ್ನೆಲೆಯಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿ ದೇಶ ರಕ್ಷಣೆಯಲ್ಲಿ ತೊಡಗಿರುವ ಭಾರತೀಯ ಸೈನಿಕರ ಪರವಾಗಿ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.ವಖ್ಫ್ ಬೋರ್ಡ್ ವ್ಯಾಪ್ತಿಯ ಮಸೀದಿಗಳು ಸೇರಿದಂತೆ ರಾಜ್ಯದ ಎಲ್ಲ ಮಸೀದಿಗಳಲ್ಲಿ ದೇಶದ ಹೆಮ್ಮಯ ಸೈನಿಕರ ಶ್ರೇಯಸ್ಸಿ ಗಾಗಿ ಹಾಗೂ ಶಕ್ತಿ ತುಂಬಲು ಶುಕ್ರವಾರದ ವಿಶೇಷ ಪ್ರಾರ್ಥನೆ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.ಈ ಕುರಿತು ವಖ್ಫ್ ಬೋರ್ಡ್ ಮುಖ್ಯ ಕಾರ್ಯನಿರ್ವಹಾಧಿಕಾರಿ ಗೆ ಸಚಿವ ಜಮೀರ್ ಅಹಮದ್ ಖಾನ್ ಅವರು ಪತ್ರ ಬರೆದು ಸೂಚನೆ ನೀಡಿದ್ದಾರೆ.ಜಗತ್ತು ಇವತ್ತು ಭಾರತದ ಕಡೆ ನೋಡುತ್ತಿದೆ. ಭಯೋತ್ಪಾದನೆಯು ಕೇವಲ ಭಾರತಕ್ಕೆ ಸೀಮಿತವಾಗಿಲ್ಲ; ಜಗತ್ತಿನ ಬೇರೆಬೇರೆ ದೇಶಗಳಲ್ಲೂ ಭಯೋತ್ಪಾದನೆಯು ದುಸ್ವಪ್ನದಂತೆ ಕಾಡುತ್ತಿದೆ. ಇದು ಅಂತ್ಯಗೊಳ್ಳಲಿ ಎಂದು ಪ್ರಾರ್ಥಿಸಿದ್ದಾಗಿ ತಿಳಿಸಿದರು. ಇಂದು ಮತ್ತು ನಾಳೆ ರಾಜ್ಯದ ಎಲ್ಲ ಜಿಲ್ಲೆಗಳು, ತಾಲ್ಲೂಕುಗಳು, ಮಂಡಲಗಳಲ್ಲೂ ಕಾರ್ಯಕರ್ತರು ಪೂಜೆ ನೆರವೇರಿಸಲಿದ್ದಾರೆ ಎಂದು ಹೇಳಿದರು.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *