Breaking News

ವಿಜಯಪುರದಲ್ಲಿ ಪಾಕಿಸ್ತಾನದ ಪರವಾಗಿ ಪೋಸ್ಟ್ ಹಾಕಿದ ವಿದ್ಯಾರ್ಥಿನಿ : ದೇಶದ್ರೋಹ ಪ್ರಕರಣ ದಾಖಲು!!

ಆಪರೇಷನ್ ಸಿಂಧೂರದ ಮೂಲಕ ಪಾಕಿಸ್ತಾನಕ್ಕೆ ಭಾರತ ತಕ್ಕ ಪ್ರತ್ಯುತ್ತರ ನೀಡಿದೆ. ಆದರೂ ಸಹ ಪಾಕಿಸ್ತಾನ ಗಡಿಯಲ್ಲಿ ಮತ್ತೆ ಮತ್ತೆ ಬಾಲ ಬಿತ್ತುತ್ತಿದೆ. ಇದೀಗ ಕರ್ನಾಟಕದಲ್ಲಿ ಕೂಡ ಹಲವು ಪಾಕಿಸ್ತಾನಿ ಪ್ರೇಮಿಗಳು ಬಾಲ ಬಿಚ್ಚಿದ್ದು, ವಿಜಯಪುರದಲ್ಲಿ ಮೆಡಿಕಲ್ ವಿದ್ಯಾರ್ಥಿನಿಯೋರ್ವಳು ಪಾಕಿಸ್ತಾನದ ಪರವಾಗಿ ಪೋಸ್ಟ್ ಮಾಡಿದ್ದು ಆಕೆಯ ವಿರುದ್ಧ ಇದೀಗ ದೇಶದ್ರೋಹದ ಅಡಿ ಪ್ರಕರಣ ದಾಖಲಾಗಿದೆ.ವಿದ್ಯಾರ್ಥಿನಿ ತಷಾವುದ್ದ ಫಾರೂಖಿ ಶೇಖ್​ ‘@hoodyyyyyyy’ ಎಂಬ ಹೆಸರಿನ ಖಾತೆಯಲ್ಲಿ “ನನ್ನ ಪಾಕಿಸ್ತಾನಿ ಸ್ನೇಹಿತರಿಗೆ, ಐಒಜೆಕೆ, ಎಜೆಕೆ ಜನರು ಸರ್ಕಾರಿ ಮಿಲಿಟರಿ ಸ್ಥಳಗಳಿಗೆ ಹೋಗಬೇಡಿ. ಗಡಿಯಿಂದ 200 ಕಿಲೋ ಮೀಟರ್ ಹೋಗಬೇಡಿ. ಅಲ್ಲಾ ಪಾಕಿಸ್ತಾನ ಹಾಗೂ ನಮ್ಮೆಲ್ಲರನ್ನೂ ಭಾರತದಿಂದ ರಕ್ಷಿಸಲಿ ಅಮೀನ್#sos” ಎಂದು ದೇಶ ವಿರೋಧಿ ಪೋಸ್ಟ್ ಹಂಚಿಕೊಂಡಿದ್ದಾಳೆ. ತನ್ನ ವಾಟ್ಸಾಪ್ ಸ್ಟೇಟಸ್‌ಗಳಲ್ಲಿ ಕೂಡ ಪೋಸ್ಟ್ ಹಾಕಿದ್ದಾಳೆ.

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *