Breaking News

ಕಲಬುರಗಿ :ಜೈಲಿಂದ ಪರಾರಿಯಾದ ಅಪರಾಧಿಗೆ ಜೈಲು ಶಿಕ್ಷೆ!

ಜಿಲ್ಲಾ ಕೇಂದ್ರ ಕಾರಾಗೃಹದ ಹೊರ ಭಾಗದ ತೋಟದಿಂದ ಪರಾರಿಯಾಗಿದ್ದ ಅಪರಾಧಿಗೆ 2ನೇ ಜೆಎಂಎಫ್‌ಸಿ ನ್ಯಾಯಾಲಯವು ಒಂದು ವರ್ಷ ಐದು ತಿಂಗಳು ಜೈಲು ಶಿಕ್ಷೆ ವಿಧಿಸಿದೆ.ಕೇಂದ್ರ ಕಾರಾಗೃಹದಲ್ಲಿ ಸಜಾ ಬಂಧಿಯಾಗಿದ್ದ ರಮೇಶ ಶಿಕ್ಷೆಗೆ ಒಳಗಾದ ಅಪರಾಧಿ. 2021ರ ಜನವರಿ 4ರಂದು ಜೈಲಿನ ಹೊರಗಿನ ತೋಟದಲ್ಲಿ ತೊಗರಿ ಬಡಿಯಲು ರಮೇಶನನ್ನು ಕರೆದೊಯ್ಯಲಾಗಿತ್ತು.ರಮೇಶ್, ಅಲ್ಲಿಂದ ಓಡಿ ಹೋಗಿ ಪರಾರಿಯಾಗಿದ್ದ.ಈ ಬಗ್ಗೆ ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎಎಸ್‌ಐ ಥಾವರು ಚವ್ಹಾಣ್ ಅವರು ತನಿಖೆ ನಡೆಸಿ ದೋಷಾರೋಪಣೆ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.ವಾದ- ಪ್ರತಿವಾದ ಆಲಿಸಿದ 2ನೇ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಸ್ಮಿತಾ ನಾಗಲಾಪುರ ಅವರು ರಮೇಶಗೆ ಒಂದು ವರ್ಷ ಐದು ತಿಂಗಳು ಜೈಲು ಶಿಕ್ಷೆ, ₹ 500 ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *