Breaking News

ಪಾಕ್ ವಿರುದ್ಧ ಭಾರತದ ಪ್ರತೀಕಾರ ಸಮರ: ಶೆಲ್ ದಾಳಿಗೆ ಆಂಧ್ರಪ್ರದೇಶದ ಸೈನಿಕ ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಪಾಕಿಸ್ತಾನ ಸೇನೆ ನಡೆಸಿದ ಭಾರೀ ಶೆಲ್ ದಾಳಿಯಲ್ಲಿ ಆಂಧ್ರಪ್ರದೇಶದ ಸೈನಿಕನೊಬ್ಬ ಸಾವನ್ನಪ್ಪಿದ್ದಾರೆ.ಆಂಧ್ರಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯ ಕಲ್ಲಿತಾಂಡ ಗ್ರಾಮದ ಯೋಧ ಮುರಳಿ ನಾಯ್ಕ್ ಪಾಕಿಸ್ತಾನದ ಸೇನೆಯೊಂದಿಗಿನ ಸಂಘರ್ಷದ ವೇಳೆ ಹುತಾತ್ಮರಾಗಿದ್ದಾರೆ. ಮುರಳಿ ನಾಯ್ಕ್ ಅವರ ಪಾರ್ಥಿವ ಶರೀರ ಮೇ 10ರ ವೇಳೆಗೆ ಸ್ವಗ್ರಾಮಕ್ಕೆ ತಲುಪುವ ನಿರೀಕ್ಷೆಯಿದೆ.ಗುರುವಾರ ರಾತ್ರಿ ಭಾರತದ ವಿರುದ್ಧ ಪಾಕಿಸ್ತಾನ ಸೇನೆ ಜಮ್ಮು ಕಾಶ್ಮೀರ ಗಡಿಯಲ್ಲಿ ಗುಂಡಿನ ದಾಳಿ ನಡೆಸಿತು. ಈ ವೇಳೆ ಭಾರತೀಯ ಸೇನೆಯೂ ಪ್ರತಿದಾಳಿ ನಡೆಸಿ ಪಾಕ್‌ಗೆ ತಿರುಗೇಟು ನೀಡಿದೆ. ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ಮುರಳಿ ನಾಯ್ಕ್ ಅವರಿಗೆ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಂತಾಪ ಸೂಚಿಸಿದ್ದಾರೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *