Breaking News

ಬೆಂಗಳೂರು: ಬಂಧಿತ ಆರೋಪಿಗಳಿಗೆ ಬೆದರಿಸಿ ಹಣ ವಸೂಲಿ ಆರೋಪ, ಮೂವರು ಪೊಲೀಸರು ವಶಕ್ಕೆ!

ಚಿಕ್ಕಜಾಲ ಠಾಣೆಯ ಇಬ್ಬರು ಹೆಡ್‍ಕಾನ್‍ಸ್ಟೇಬಲ್ ಹಾಗೂ ಒಬ್ಬರು ಕಾನ್‍ಸ್ಟೇಬಲ್ ಸೇರಿ ಮೂವರನ್ನು ವಶಕ್ಕೆ ಪಡೆದಿರುವ ಬಾಗಲೂರು ಠಾಣೆಯ ಪೊಲೀಸರು ವಿಚಾರಣೆಗೊಳಪಡಿಸಿರುವುದಾಗಿ ತಿಳಿದುಬಂದಿದೆ.ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಣ ದ್ವಿಗುಣಗೊಳಿಸುವ ದಂಧೆಗೆ ಸಂಬಂಧಪಟ್ಟಂತೆ ಖಚಿತ ಮಾಹಿತಿ ಪಡೆದು ಪ್ರತಿಷ್ಠಿತ ಹೋಟೆಲ್‍ವೊಂದಕ್ಕೆ ದಾಳಿ ನಡೆಸಿದ ಚಿಕ್ಕಜಾಲ ಠಾಣೆಯ ಪೊಲೀಸರು, ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿ, ಅನಂತರ ಅವರನ್ನು ಬೆದರಿಸಿ ಆರು ಲಕ್ಷ ರೂ. ಪಡೆದುಕೊಂಡು ಯಾವುದೇ ಪ್ರಕರಣ ದಾಖಲಿಸಿಕೊಳ್ಳದೆ ಆರೋಪಿಗಳನ್ನು ಬಿಟ್ಟು ಕಳುಹಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಈ ಸಂಬಂಧ ತನಿಖೆ ಆರಂಭಿಸಿರುವ ಬಾಗಲೂರು ಠಾಣಾ ಪೊಲೀಸರು ಪ್ರಕರಣದಲ್ಲಿ ಇನ್ನೂ ಕೆಲವರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿರುವುದಾಗಿ ಮೂಲಗಳು ತಿಳಿಸಿವೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *