Breaking News

ಶ್ರೀನಗರ ಬಳಿ ಪಾಕಿಸ್ತಾನದ 2 ಫೈಟರ್ ಜೆಟ್ ಹೊಡೆದುರುಳಿಸಿದ ಭಾರತ!!

ಪಾಕಿಸ್ತಾನದ 2 ಜೆಟ್‌ಗಳನ್ನು ಶನಿವಾರ ಹೊಡೆದುರುಳಿಸಲಾಗಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿರುವುದಾಗಿ ಸುದ್ದಿವಾಹಿನಿಯೊಂದು ವರದಿ ಮಾಡಿದೆ. ಮೂಲಗಳ ಪ್ರಕಾರ, 2 ಪಾಕಿಸ್ತಾನಿ ಜೆಟ್‌ಗಳ ಪೈಕಿ ಒಂದನ್ನು ಶ್ರೀನಗರದ ಲಾಸ್ಜನ್ ಬಳಿ ಹೊಡೆದುರುಳಿಸಲಾಗಿದೆ ಮತ್ತು ಇನ್ನೊಂದನ್ನು ಉತ್ತರ ಕಾಶ್ಮೀರದಲ್ಲಿ ಹೊಡೆದುರುಳಿಸಲಾಗಿದೆ.ಘಟನೆಯ ಬಗ್ಗೆ ರಕ್ಷಣಾ ಇಲಾಖೆ ಇನ್ನೂ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿಲ್ಲ. ಆದಾಗ್ಯೂ, ಭಾರತೀಯ ಸೇನೆ ಹೊಡೆದುರುಳಿಸಿರುವುದು F-16 ಜೆಟ್‌ಗಳು ಎಂದು ವರದಿಯಾಗಿದೆ. ಏತನ್ಮಧ್ಯೆ, ಉಭಯ ರಾಷ್ಟ್ರಗಳ ವಾಯುಪಡೆಗಳ ನಡುವಣ ದಾಳಿ, ಪ್ರತಿದಾಳಿ ಮುಂದುವರಿದಿರುವುದನ್ನು ಸರ್ಕಾರಿ ಮೂಲಗಳು ದೃಢಪಡಿಸಿವೆ.ಪಾಕಿಸ್ತಾನ ಮತ್ತೊಮ್ಮೆ ಪಂಜಾಬ್‌ನ ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಪಂಜಾಬ್‌ನ ಅಮೃತಸರದಲ್ಲಿ ಭಾರತೀಯ ವಾಯು ರಕ್ಷಣಾ ಪಡೆಗಳು ಹಲವಾರು ಪಾಕಿಸ್ತಾನಿ ಡ್ರೋನ್‌ಗಳನ್ನು ತಟಸ್ಥಗೊಳಿಸಿವೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *