Breaking News
Oplus_131072

ಸಾಗರ :ಪೂಜೆ ನೆಪದಲ್ಲಿ ಬಂಗಾರದ ಆಭರಣ ಕಳ್ಳತನ: ನಕಲಿ ಸ್ವಾಮೀಜಿ ಬಂಧನ!!

ಕಾಯಿಲೆ ವಾಸಿ ಮಾಡುತ್ತೇನೆ ಎಂದು ಹೇಳಿ ಮಹಿಳೆಯ ಮಾಂಗಲ್ಯ ಸರ, ಪುರುಷನ ಉಂಗುರವನ್ನು ಅಪಹರಿಸಿಕೊಂಡು ಹೋಗಿದ್ದ ಕಳ್ಳ ಸ್ವಾಮಿಯೋರ್ವನನ್ನು ಗುರುವಾರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.ಪೂಜೆ ಮಾಡುವಾಗ ಹಿಟ್ಟಿನ ಗೊಂಬೆಯೊಳಗೆ ಚೈನ್‌ ಮತ್ತು ಉಂಗುರ ಅಡಗಿಸಿ ಇಡಬೇಕು ಎಂದು ಹೇಳಿ ಶೈಲಜಾರ ಕುತ್ತಿಗೆಯಲ್ಲಿದ್ದ 35 ಗ್ರಾಂ ತೂಕದ ಮಾಂಗಲ್ಯ ಸರ, ವಿನಾಯಕ ಅವರ ಕೈಯಲ್ಲಿದ್ದ 5 ಗ್ರಾಂ. ತೂಕದ ಉಂಗುರವನ್ನು ನಕಲಿ ಸ್ವಾಮಿ ಪಡೆದುಕೊಂಡಿದ್ದ. ಆದರೆ ಪೂಜೆ ಬಳಿಕ ಹಿಟ್ಟಿನ ಗೊಂಬೆಯಲ್ಲಿ ಹುಡುಕಿದಾಗ ಮಾಂಗಲ್ಯ ಸರ ಮತ್ತು ಉಂಗುರ ನಾಪತ್ತೆಯಾಗಿತ್ತು.ಈ ಸಂಬಂಧ ವಿನಾಯಕ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರು. ಡಿವೈಎಸ್‌ಪಿ ಗೋಪಾಲಕೃಷ್ಣ ನಾಯಕ್‌ ಮಾರ್ಗದರ್ಶನದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿತ್ತು. ಈ ತಂಡವು ಆರೋಪಿ, ಹಾವೇರಿ ಜಿಲ್ಲೆ ಹಾನಗಲ್‌ ತಾಲೂಕು ಹೊಂಬ್ಳಿ ಗ್ರಾಮದ ವಾಸಿ ಬಸಯ್ಯ ಹಿರೇಮಠ ಎಂಬಾತನನ್ನು ಬಂಧಿಸಿದೆ. ಆತನಿಂದ 3.40 ಲಕ್ಷ ರೂ. ಮೌಲ್ಯದ ಆಭರಣವನ್ನು ವಶಕ್ಕೆ ಪಡೆಯಲಾಗಿದೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *