ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಾಬೀತಾಗಿದ್ದರಿಂದ ತಾಲ್ಲೂಕಿನ ತಾಂಡಾವೊಂದರ ನಿವಾಸಿ ಸೋನು ತಾರಾಸಿಂಗ್ ಜಾಧವ್ (19) ಎಂಬಾತನಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ ₹ 30 ಸಾವಿರ ದಂಡ ವಿಧಿಸಿದೆ.ಪಿಎಸ್‌ಐ ರೇಣುಕಾದೇವಿ ಹಾಗೂ ಪಿಐ ಸುಶೀಲಕುಮಾರ್ ಅವರು ಸೋನು ಜಾಧವ್ ವಿರುದ್ಧ ಬಿಎನ್‌ಎಸ್ ಕಾಯ್ದೆ ಹಾಗೂ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು.ವಿಚಾರಣೆ ನಡೆಸಿದ ನ್ಯಾಯಾಧೀಶ ಯಮನಪ್ಪ ಬಮ್ಮಣಗಿ ಅವರು, ಅಪರಾಧಿಗೆ ಶಿಕ್ಷೆ ವಿಧಿಸಿದ್ದಾರೆ. ದಂಡದ ಮೊತ್ತವನ್ನು ಪಾವತಿಸಲು ವಿಫಲನಾದರೆ ಆರು ತಿಂಗಳು ಹೆಚ್ಚುವರಿ ಜೈಲು ಶಿಕ್ಷೆ ಅನುಭವಿಸಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

