ಭಾರತ-ಪಾಕಿಸ್ತಾನ ನಡುವೆ ಉದ್ವಿಗ್ನ ಸ್ಥಿತಿ ಮುಂದುವರೆದಿದ್ದು ಯುದ್ಧದ ಭೀತಿ ಎದುರಾಗಿದೆ ಈ ಹಿನ್ನೆಲೆಯಲ್ಲಿ ರಾಜ್ಯದ ಪೊಲೀಸರಿಗೂ ಹೆಚ್ಚುವರಿ ರಜೆ ರದ್ದು ಮಾಡಲಾಗಿದೆ.ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಯುದ್ಧದ ಭೀತಿ ಎದುರಾಗಿದೆ.ರಾಜ್ಯದ ಪೊಲೀಸರಿಗೆ ಹೆಚ್ಚುವರಿ ರಜೆ ರದ್ದು ಮಾಡಲಾಗಿದೆ. ಈ ಸದರ್ಭದಲ್ಲಿ ಪೊಲೀಸರಿಗೆ ಹೆಚ್ಚುವರಿ ರಜೆ ಇರುವುದಿಲ್ಲ. ಯಾವಾಗ ಏನಾಗುತ್ತೋ ಗೊತ್ತಿಲ್ಲ. ಹಾಗಾಗಿ ಸಧ್ಯ ಪೊಲೀಸ್ ಇಲಾಖೆ ಸಿಬ್ಬಂದಿಗೆ ಯಾವುದೇ ರಜೆ ಕೊಡಲ್ಲ ಎಂದು ತಿಳಿಸಿದರು.
