Breaking News

ಸಿದ್ದಾಪುರ: ಕಾಡುಕೋಣ ಭೇಟೆ, ಇಬ್ಬರ ಬಂಧನ!

ಕುಶಾಲನಗರ ವಲಯ ಅರಣ್ಯ ವ್ಯಾಪ್ತಿ ವರೆಗುಂದ ಮೀಸಲು ಅರಣ್ಯದಲ್ಲಿ ಎರಡು ಕಾಡುಕೋಣಗಳನ್ನು ಗುಂಡಿಟ್ಟು ಕೊಂದ ಗುಹ್ಯ ಗ್ರಾಮದ ಕೂಡುಗದ್ದೆ ನಿವಾಸಿ ಅಸ್ಕರ್ (26) ಹಾಗೂ ಸಿದ್ದಾಪುರದ ಹೈಸ್ಕೂಲ್ ಪೈಸಾರಿ ನಿವಾಸಿ ವಿನೋದ್ ಕುಮಾರ್ (34)ಎಂಬುವರನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ.ಪ್ರಕರಣ ದಾಖಲಿಸಿದ ಅರಣ್ಯ ಇಲಾಖೆ ಸಿಬ್ಬಂದಿ ತನಿಖೆ ನಡೆಸಿ, ಇಬ್ಬರನ್ನು ಬಂಧಿಸಿದ್ದಾರೆ. ಕೂಡುಗದ್ದೆ ನಿವಾಸಿ ಸೂರಿ ಸುಬ್ರಮಣ್ಯ ಸೇರಿದಂತೆ ನಾಲ್ಕು ಮಂದಿ ಪರಾರಿಯಾಗಿದ್ದು, ಅಧಿಕಾರಿಗಳು ಬಂಧನಕ್ಕಾಗಿ ಬಲೆ ಬೀಸಿದ್ದಾರೆ. ಕಾಡುಕೋಣ ಹತ್ಯೆಗೆ ಬಳಸಿದ್ದ ಬಂಧೂಕು ಹಾಗೂ ಕಾರು ಪತ್ತೆಯಾಗಿಲ್ಲ.ಕಾರ್ಯಾಚರಣೆಯಲ್ಲಿ ಎ.ಸಿ.ಎಫ್.ಗೋಪಾಲ್.ಎ.ಎ., ಕುಶಾಲನಗರ ವಲಯ ಅರಣ್ಯ ಅಧಿಕಾರಿ ರತನ್ ಕುಮಾರ್, ಉಪ ವಲಯ ಅರಣ್ಯ ಅಧಿಕಾರಿ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *