ಆಟವಾಡುತ್ತಿದ್ದ ಮಗು ತೆರೆದ ಬಾವಿಗೆ ಬಿದ್ದು ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ನಡೆದಿದೆ. ಮೂರು ವರ್ಷದ ಹರ್ಷಿತ್ ಪಾಟೀಲ್ ಬಾವಿಗೆ ಬಿದ್ದು ಮೃತಪಟ್ಟ ಮಗು.ಕಂಗಾಲಾದ ಕುಟುಂಬಸ್ಥರು ಹರ್ಷಿತ್ ಹುಡುಕಾಟದಲ್ಲಿ ತೊಡಗಿದ್ದರು. ಇಂದು ಸ್ಥಳೀಯರು ಬಾವಿಯಲ್ಲಿ ಇಳಿದು ನೋಡಿದಾಗ ಮಗುವಿನ ಮೃತದೇಹ ಪತ್ತೆಯಾಗಿದೆ.ಘಟನೆ ಸಂಬಂಧ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

