ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಶೇರ್ ಮಾಡಿದ ಆರೋಪದಲ್ಲಿ ಮಳವಳ್ಳ ತಾಲ್ಲೂಕಿನ ಕಿರುಗಾವಲು ಗ್ರಾಮದ ಜಾವೀದ್ ಎಂಬ ವ್ಯಕ್ತಿಯನ್ನು ಪೋಲೀಸರು ಬಂಧಿಸಿದ್ದಾರೆ. ಆರೋಪಿ ಜಾವೀದ್ ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್‌ಗೆ ಮೋದಿ ಶೂ ಧರಿಸುವಂತೆ ತೋರಿಸುವ ಎಡಿಟ್ ಮಾಡಿದ ಪೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡುವ ಮೂಲಕ ವಿಕೃತಿ ಮೆರೆದಿದ್ದ ಎನ್ನಲಾಗಿದೆ.ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಈ ಕುರಿತು ಅಧಿಕೃತ ಮಾಹಿತಿ ನೀಡಿದ್ದು, ಬಿಜೆಪಿ ಕಾರ್ಯಕರ್ತರ ದೂರಿನ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ನಾಗರಿಕ ಸಂಹಿತೆ ಕಲಂ 152, 192, ಮತ್ತು 340 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

