ಪದ್ಮಶ್ರೀ ಪುರಸ್ಕೃತ ಕೃಷಿ ವಿಜ್ಞಾನಿ ಡಾ.ಸುಬ್ಬಣ್ಣ ಅಯ್ಯಪ್ಪನ್ (70) ಅವರು ಮಂಡ್ಯದ ಶ್ರೀರಂಗಪಟ್ಟಣದ ಸಾಯಿ ಆಶ್ರಮದ ಬಳಿ ಕಾವೇರಿ ನದಿಯಲ್ಲಿ ಶವವವಾಗಿ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.ಡಾ.ಸುಬ್ಬಣ್ಣ ಅಯ್ಯಪ್ಪನ್ ಅವರು ಮೂರು ದಿನಗಳ ಹಿಂದೆ ಶ್ರೀರಂಗಪಟ್ಟಣದ ಸಾಯಿಬಾಬಾ ಆಶ್ರಮದ ಬಳಿ ನದಿಗೆ ಹಾರಿದ್ದಾರೆ ಎಂಬುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಅವರ ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

