ಚಲಿಸುವ ಕಾರ್ ನೊಳಗೆ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಆಕೆಯ ಜೊತೆಗಿದ್ದ ಸ್ನೇಹಿತೆ ವಾಹನದಿಂದ ಹೊರಗೆ ತಳ್ಳಲ್ಪಟ್ಟ ನಂತರ ಸಾವನ್ನಪ್ಪಿದ್ದಾರೆ.ಗ್ರೇಟರ್ ನೋಯ್ಡಾದಿಂದ ಇಬ್ಬರು ಮಹಿಳೆಯರನ್ನು ಕರೆದುಕೊಂಡು ಬಲವಂತವಾಗಿ ಕಾರ್ ಹತ್ತಿಸಿಕೊಂಡು ಹೋಗಿ ಕೃತ್ಯವೆಸಗಿದ್ದಾರೆ.ಪೊಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಆರೋಪಿಗಳ ಕಾಲುಗಳಿಗೆ ಗುಂಡು ತಗುಲಿದೆ.ಬಂಧಿತ ವ್ಯಕ್ತಿಗಳನ್ನು ಸಂದೀಪ್, ಗೌರವ್ ಮತ್ತು ಅಮಿತ್ ಎಂದು ಗುರುತಿಸಲಾಗಿದೆ. ಎನ್ಕೌಂಟರ್ನಲ್ಲಿ ಸಂದೀಪ್ ಮತ್ತು ಗೌರವ್ ಗಾಯಗೊಂಡಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ(ಗ್ರಾಮೀಣ) ಡಾ. ತೇಜ್ವೀರ್ ಸಿಂಗ್ ತಿಳಿಸಿದ್ದಾರೆ.ಬಂಧಿತ ವ್ಯಕ್ತಿಗಳಿಂದ ಅಕ್ರಮ ಬಂದೂಕುಗಳು, ಮದ್ದುಗುಂಡುಗಳು, ಬಳಸಲಾದ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಹಿಳೆ ನೀಡಿದ ದೂರಿನ ಮೇರೆಗೆ ಬುಧವಾರ ಖುರ್ಜಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

