ಕನ್ನಡ ಚಿತ್ರರಂಗ, ರಂಗಭೂಮಿ ಉದಯೋನ್ಮುಖ ನಟನನ್ನು ಕಳೆದುಕೊಂಡಿದೆ. ಹೃದಯಾಘಾತಕ್ಕೆ ನಗುಮುಖದ, ಸರಳ ವ್ಯಕ್ತಿತ್ವದ ರಾಕೇಶ್ ಪೂಜಾರಿ ಬಲಿಯಾಗಿದ್ದಾರೆ.ಉಡುಪಿಯ ಕಾರ್ಕಳದ ನಿಟ್ಟೆ ಗ್ರಾಮದಲ್ಲಿ ಸ್ನೇಹಿತನ ಮೆಹೆಂದಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಸ್ನೇಹಿತರ ಜತೆ ಇದ್ದಾಗಲೇ ಅವರಿಗೆ ಹಠಾತ್ ಹೃದಯಾಘಾತವಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಆದರೆ ಚಿಕಿತ್ಸೆ ಫಲಿಸದೆ ಅವರು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.ಇಂತಹ ಅದ್ಭುತ ಕಲಾವಿದ ಸಣ್ಣ ವಯಸ್ಸಿನಲ್ಲೇ ನಮ್ಮನ್ನು ಅಗಲಿದ್ದಾರೆ.12 ಗಂಟೆಗೆ ಪಾರ್ಥಿವ ಶರೀರವನ್ನು ಊರಿಗೆ ತರಲಾಗುತ್ತದೆ. ಹೊಡೆಯ ಮೈದಾನದಲ್ಲಿ ಮಧ್ಯಾಹ್ನ 2 ಗಂಟೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಮೂಲಗಳು ಹೇಳಿವೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

