Breaking News

ರಾಜಾಜಿನಗರದಲ್ಲಿ ಪಿಸ್ತೂಲ್ ಹಿಡಿದು ಪಬ್​ಗೆ ನುಗ್ಗಿದ ಅಪರಿಚಿತ ವ್ಯಕ್ತಿ!!

ವ್ಯಕ್ತಿಯೊಬ್ಬ ಪಿಸ್ತೂಲ್​ ಹಿಡಿದು ಪಬ​ಗೆ ಬಂದು ಆತಂಕ ಸೃಷ್ಟಿಸಿರುವ ಘಟನೆ ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದಿದೆ. ಅಪರಿಚಿತ ವ್ಯಕ್ತಿಯೊಬ್ಬ ಪಿಸ್ತೂಲ್ ಹಿಡಿದು ಎಲ್ಲೆಡೆ ಓಡಾಡುತ್ತಿದ್ದ, ಏಕಾಏಕಿ ರಾಜಾಜಿನಗರದಲ್ಲಿರುವ ಜಾಮಿಟ್ರಿ ಪಬ್​ಗೆ ಬಂದಿದ್ದಾರೆ.ಪಬ್​ನಲ್ಲಿ ಆತ ಅವಿತುಕೊಂಡಿದ್ದು, ಆತನನ್ನು ವಶಕ್ಕೆ ಪಡೆಯಲು ಪೊಲೀಸರು ಮುಂದಾಗಿದ್ದಾರೆ. ಪಿಸ್ತೂಲ್​ ಇರುವುದರಿಂದ ಈ ಪ್ರಕರಣವನ್ನು ತುಂಬಾ ಸೂಕ್ಷ್ಮವಾಗಿ ತೆಗೆದುಕೊಳ್ಳಬೇಕಿದೆ. ಘಟನಾ ಸ್ಥಳದಲ್ಲಿ ಡ್ರೋನ್ ಹಾರಿಸಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಕಳ್ಳತನಕ್ಕೆ ಬಂದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಉತ್ತರ ವಿಭಾಗದ ಡಿಸಿಪಿ ಸೈದುಲು ಅಡಾವತ್ ಆಗಮಿಸಿದ್ದಾರೆ. ಸುಬ್ರಹ್ಮಣ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ನಡೆದಿದೆ. ಅಧ್ಯ ಆತ ಪಬ್​ನ ಒಳಗಡೆಯೇ ಅವಿತುಕೊಂಡಿದ್ದಾನೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *