Breaking News

ಮಥುರಾ :ವಿದ್ಯಾರ್ಥಿನಿಯರ ಮೈಮುಟ್ಟಿ ಅಶ್ಲೀಲ ವಿಡಿಯೋ ತೋರಿಸಿದ ಕಾಮುಕ ಶಿಕ್ಷಕ ಅರೆಸ್ಟ್!

ಮಥುರಾ ಜಿಲ್ಲೆಯ ಛಾಟಾ ಪೊಲೀಸ್ ಠಾಣೆ ಪ್ರದೇಶದಲ್ಲಿರುವ ಸರ್ಕಾರಿ ಜೂನಿಯರ್ ಹೈಸ್ಕೂಲ್‌ನಿಂದ ಬಹಳ ಗಂಭೀರ ಮತ್ತು ಆತಂಕಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಶಾಲೆಯಲ್ಲಿ ಇಂಟರ್ನ್‌ಶಿಪ್ ಮಾಡುತ್ತಿರುವ ತರಬೇತಿ ಶಿಕ್ಷಕರೊಬ್ಬರು ವಿದ್ಯಾರ್ಥಿನಿಯರನ್ನು ಅಸಭ್ಯವಾಗಿ ಸ್ಪರ್ಶಿಸಿ ಅವರಿಗೆ ವಯಸ್ಕರ ವೀಡಿಯೊಗಳನ್ನು ತೋರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.ವಿದ್ಯಾರ್ಥಿನಿಯರ ಕುಟುಂಬ ಸದಸ್ಯರು ಮತ್ತು ಶಾಲಾ ಸಿಬ್ಬಂದಿ ಪೊಲೀಸ್ ಠಾಣೆಯಲ್ಲಿ ಲಿಖಿತ ದೂರು ದಾಖಲಿಸಿದ್ದು, ಅದರಲ್ಲಿ ಆರುಕ್ಕೂ ಹೆಚ್ಚು ವಿದ್ಯಾರ್ಥಿನಿಯರ ಸಹಿಗಳಿವೆ. ದೂರು ಸ್ವೀಕರಿಸಿದ ನಂತರ, ಪೊಲೀಸರು ಆರೋಪಿ ಟ್ರೈನಿ ಶಿಕ್ಷಕ ರವಿ ಶರ್ಮಾ ಅವರನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸ್ ಠಾಣೆಯಿಂದ ಬಂದ ಮಾಹಿತಿಯ ಪ್ರಕಾರ, ಶಾಲೆಯ ಪ್ರಾಂಶುಪಾಲರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಸದ್ಯ ಪ್ರಕರಣ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ವಿದ್ಯಾರ್ಥಿನಿಯರ ಸುರಕ್ಷತೆ ಮತ್ತು ಗೌಪ್ಯತೆಯನ್ನು ಗಮನದಲ್ಲಿಟ್ಟುಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *