ಎರಡು ಟ್ರಕ್ ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ 13 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಛತ್ತೀಸ್ ಘರ್ ರಾಜ್ಯದ ರಾಯಪುರ -ಬಲೋಡಾಬಜಾರ್ ರಸ್ತೆಯಲ್ಲಿ ಸೋಮವಾರ ಮುಂಜಾನೆ ಸಂಭವಿಸಿದೆ.ಚೌತಿಯಾ ಚಟ್ಟಿ ಕಾರ್ಯಕ್ರಮ ಮುಗಿಸಿ ವಾಪಸ್ ಬರುವ ವೇಳೆ ಅವಘಡ ನಡೆದಿದೆ. ಅತಿಯಾದ ವೇಗದ ಚಾಲನೆಯಿಂದ ನಿಯಂತ್ರಣ ತಪ್ಪಿ ಅಪಘಾತ ನಡೆದಿದೆ. ಮೃತರ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.ಗಾಯಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಓವರ್ ಲೋಡಿಂಗ್ ನಿಂದ ಅಪಘಾತ ನಡೆದಿದೆ ಎಂದು ಸ್ಥಳೀಯರು ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

