ಹುಬ್ಬಳ್ಳಿಯ ಅಡ್ಡೆ ಒಂದರಲ್ಲಿ ಅಪ್ರಾಪ್ತ ಬಾಲಕನಿಂದ ಕ್ಷುಲಕ ಕಾರಣಕ್ಕೆ ಜಗಳ ನಡೆದಿದ್ದು ಜಗಳವು ವಿಕೋಪಕ್ಕೆ ತಿರುಗಿ ಚಾಕುವಿನಿಂದ ಇರಿದು ಬಾಲಕನನ್ನು ಕೊಲೆ ಮಾಡಲಾಗಿದೆ. ಅಪ್ರಾಪ್ತ ಬಾಲಕ ಸೋಮಶೇಖರ್ ಎಂಬುವವನಿಗೆ ಚಾಕು ಇರಿದು ಕೊಲೆ ಮಾಡಿದ್ದಾನೆ. ಚಾಕು ಇರಿದ ಬಾಲಕ ಪರಾರಿಯಾಗಿದ್ದು ಪೊಲೀಸರು ಇದೀಗ ವಶಕ್ಕೆ ಪಡೆದ್ದಿದ್ದಾರೆ. ಈ ಘಟನೆ ಕುರಿತು ಕಮರಿಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
