ಸಿಡಿಲು ಬಡಿದು ರೈತ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹಿರೇಕೆರೂರ ತಾಲೂಕಿನ ಡಮ್ಮಳ್ಳಿ ಗ್ರಾಮದಲ್ಲಿ ಸೋಮವಾರ ಜರುಗಿದೆ . ಡಮ್ಮಳ್ಳಿ ಗ್ರಾಮದ ನಾಗಪ್ಪ ಕಣಸೋಗಿ ಮೃತಪಟ್ಟವರು. ಎತ್ತು ಮೇಯಿಸಲೆಂದು ಹೊಲದ ಕಡೆಗೆ ಹೋಗಿ ಮರಳಿ ಮನೆಗೆ ಬರುವಾಗ ಸಿಡಿಲು ಬಡಿದು ರೈತ ನಾಗಪ್ಪ ಕಣಸೋಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಘಟನಾ ಸ್ಥಳಕ್ಕೆ ಹಿರೇಕೆರೂರು ಶಾಸಕ ಯು.ಬಿ. ಬಣಕಾರ, ತಹಸೀಲ್ದಾರ್ ಪ್ರಭಾಕರ್ ಮತ್ತು ಹಿರೇಕೆರೂರು ಪೊಲೀಸರು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ. ಈ ಕುರಿತು ಹಿರೇಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

