ರಾಯಚೂರಿನಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, 4 ವರ್ಷದ ಬಾಲಕಿಯ ಮೇಲೆ ಸಂಬಂಧಿಕ ಯುವಕನೇ ಅತ್ಯಾಚಾರ ಎಸಗಿದ್ದಾನೆ. ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ಘಟನೆ ನಡೆದಿದೆ. ಮನೆಯ ಬಳಿ ಆಟವಾಡುತ್ತಿದ್ದ ಬಾಲಕಿ, ಆರೋಪಿಯ ಮನೆಯೊಳಗೆ ಹೋಗಿದ್ದಾಳೆ. ಇದನ್ನೇ ದುರುಪಯೋಗಪಡಿಸಿಕೊಂಡ ದುರುಳ ಯುವಕ, ಬಾಲಕಿಗೆ 5 ರೂಪಾಯಿ ಹಣ ನೀಡಿ, ಪುಸಲಾಯಿಸಿ ಅತ್ಯಾಚಾರವೆಸಗಿದ್ದಾನೆ.ಮರುದಿನ ಬಾಲಕಿಯ ಆರೋಗ್ಯದಲ್ಲಿ ಏರುಪೇರಾಗಿದೆ. ತಕ್ಷಣ ಪೋಷಕರು ಬಾಲಕಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಈ ಸಂದರ್ಭದಲ್ಲಿ ಘಟನೆಯ ಬಗ್ಗೆ ಬಾಲಕಿ ಹೇಳಿದ್ದಾಳೆ. ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ಬಳಗಾನೂರು ಠಾಣೆಯಲ್ಲಿ ಪೋಕ್ಸೊ ಅಡಿ ಎಫ್‌ಐಆರ್ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

