ಭೀಮಾನದಿಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸಣಗಿ ಬ್ಯಾರೇಜ್ ಮುಂಭಾಗ ನಡೆದಿದೆ.ಸ್ಥಳೀಯರ ಸಹಾಯದಿಂದ ನೀರಿನಿಂದ ಮೃತದೇಹವನ್ನು ತೆಗೆಯಲಾಗಿದ್ದು, ಸ್ಥಳಕ್ಕೆ ವಡಗೇರಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ವಡಗೇರಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೃತರನ್ನು ಗುರುಸಣಗಿ ಗ್ರಾಮದ ಶಕೀಲ್ (18) ಮಹಿಬೂಬ್ (20) ಎಂದು ಗುರುತಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

