Breaking News

9ನೇ ತರಗತಿಯ ಸ್ನೇಹಿತನನ್ನೇ ಇರಿದು ಕೊಂದ 6ನೇ ಕ್ಲಾಸ್ ಬಾಲಕ!!

ಹುಬ್ಬಳ್ಳಿ  ಹದಿಮೂರು ವರ್ಷದ ಅಪ್ರಾಪ್ತ ಬಾಲಕ , ತನ್ನ ಮನೆ ಮುಂದೆಯೇ ಇರೋ ತನ್ನ ಸ್ನೇಹಿತನಾಗಿದ್ದ ಹದಿನೈದು ವರ್ಷದ ಬಾಲಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.. ಸಂಜೆ ಏಳು ಗಂಟೆ ಸಮಯದಲ್ಲಿ ಮನೆಯಿಂದ ಚಾಕುತಂದು, ಚೇತನ್ ನ ಹೊಟ್ಟೆಯ ಎಡಬಾಗದಲ್ಲಿ ಇರದಿದ್ದಾನೆ. ಚಾಕು ಇರಿಯುತ್ತಿದ್ದಂತೆ ಚೇತನ್ ಕುಸಿದು ಬಿದ್ದಿದ್ದಾನೆ. ಮಕ್ಕಳೆಲ್ಲರು ಚೀರುತ್ತಿದ್ದಂತೆ, ಕೊಲೆ ಮಾಡಿದ ಬಾಲಕನ ತಾಯಿ ಓಡಿ ಬಂದು, ಚೇತನ ನೆರವಿಗೆ ಬಂದಿದ್ದಾರೆ. ಕೂಡಲೇ ಚೇತನ್ ನನ್ನು, ಕೊಲೆ ಮಾಡಿದ ಬಾಲಕನ ತಾಯಿಯೇ ಕರೆದುಕೊಂಡು ಕಿಮ್ಸ್ ಆಸ್ಪತ್ರೆಗೆ ಬಂದಿದ್ದಾರೆ. ಆದ್ರೆ ಆಸ್ಪತ್ರೆ ಸೇರುವ ಮುನ್ನವೇ ಚೇತನ್ ಬಾರದ ಲೋಕಕ್ಕೆ ಹೋಗಿದ್ದಾನೆ.ಸದ್ಯ ಚೇತನ್ ಕೊಲೆಗೆ ಸಂಬಂಧಿದಂತೆ ಕಮರಿಪೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಕೊಲೆ ಮಾಡಿದ ಬಾಲಕನನ್ನು ಬಾಲ ಮಂದಿರಕ್ಕೆ ಕಳುಹಿಸಿದ್ದಾರೆ

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *