Breaking News

ನಂಜನಗೂಡು: ಚಲಿಸುತ್ತಿದ್ದ ಕಾರಿನ ಮೇಲೆ ಉರುಳಿ ಬಿದ್ದ ಲಾರಿ; ಚಾಲಕ ಸ್ಥಳದಲ್ಲೇ ಸಾವು, ಆರು ಮಂದಿಗೆ ಗಂಭೀರ ಗಾಯ!

ಮೈಸೂರಿನಿಂದ ಗುಂಡ್ಲುಪೇಟೆ ಬಳಿಯ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳುತಿದ್ದ ಕಾರಿನ ಮೇಲೆ ಟ್ಯಾಂಕರ್ ಲಾರಿ ಉರುಳಿ ಬಿದ್ದು ಕಾರಿನ ಚಾಲಕ ಸ್ಥಳದಲ್ಲೇ ಮೃತಪಟ್ಟು, ಮಕ್ಕಳು ಸೇರಿದಂತೆ ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ.ಮೃತಪಟ್ಟಿರುವ ಕಾರಿನ ಚಾಲಕನ ಮೃತದೇಹವನ್ನು ನಂಜನಗೂಡಿನ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಆರು ಮಂದಿಯನ್ನು ಮೈಸೂರಿನ ಖಾಸಗಿ ಆಸ್ಪತ್ರೆಯ ತುರ್ತು ಘಟಕದಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ನಂಜನಗೂಡಿನ ಸಂಚಾರಿ ಪೊಲೀಸ್ ಠಾಣೆಯ ಪಿಎಸ್‌ಐ ಸಿದ್ದರಾಜು, ಮಾದೇಶ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಪಘಾತಕ್ಕೆ ಕಾರಣವಾಗಿರುವ ಟ್ಯಾಂಕರ್ ಮತ್ತು ಜಖಂಗೊಂಡಿರುವ ಕಾರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *