ತಾಲ್ಲೂಕಿನ ಚಿಕ್ಕಾಂಶಿ ಗ್ರಾಮದ ಕೆರೆಯಲ್ಲಿ ಮುಳುಗಿ ಗ್ರಾಮದ ಇಬ್ಬರು ಯುವಕರು ಮೃತಪಟ್ಟ ಘಟನೆ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.ಬಸವರಾಜ ಬಡಕಣ್ಣನವರ (38) ಮತ್ತು ಮಾಲತೇಶ ಕುರುಬರ (19) ಮೃತಪಟ್ಟವರು. ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಸಮಯದಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.ಮೃತ ದೇಹಗಳ ಶೋಧ ಕಾರ್ಯಾಚರಣೆಯನ್ನು ಅಗ್ನಿಶಾಮಕ ಸಿಬ್ಬಂದಿ ಕೈಗೊಂಡಿದ್ದರು. ಮಾಲತೇಶ ಕುರುಬರ ಮೃತ ದೇಹ ಮಾತ್ರ ಸಿಕ್ಕಿದೆ. ಸಂಜೆಯ ತನಕ ನಡೆದ ಕಾರ್ಯಾಚರಣೆಯಲ್ಲಿ ಮತ್ತೊಂದು ಮೃತ ದೇಹದ ಪತ್ತೆಯಾಗಲಿಲ್ಲ. ನಾಳೆಗೆ ಮತ್ತೆ ಶೋಧ ಕಾರ್ಯ ಮುಂದುವರೆಸಲಾಗುತ್ತದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

