Breaking News

ಬೆಳಗಾವಿ:ಮಳೆ ಅಬ್ಬರಕ್ಕೆ ಚರಂಡಿಯಲ್ಲಿ ಕೊಚ್ಚಿಕೊಂಡು ಹೋದ ವ್ಯಕ್ತಿ!!

ಅಂಬೇಡ್ಕರ್‌ ನಗರದ ನಿವಾಸಿ ಕಾಟೆಪ್ಪ ದುರಗಪ್ಪ ಶಿರಹಟ್ಟಿ (52) ಅವರು ಮಂಗಳವಾರ ಸಂಜೆ ಚರಂಡಿಯಲ್ಲಿ ಬಿದ್ದು ಕೊಚ್ಚಿಕೊಂಡು ಹೋಗಿದ್ದಾರೆ.ಧಾರಾಕಾರ ಮಳೆಯಿಂದಾಗಿ ಬೃಹತ್ ಚರಂಡಿಯಲ್ಲಿ ನೀರು ಹರಿಯುತ್ತಿತ್ತು. ಕಾಟೆ‍ಪ್ಪ ಅವರು ಚರಂಡಿ ಮೇಲೆ ನಡೆದುಕೊಂಡು ಹೊರಟಾಗ ಆಯತಪ್ಪಿ ಬಿದ್ದರು.ಹತ್ತಿರದಲ್ಲಿದ್ದವರು ಅವರನ್ನು ಕಾಪಾಡಲು ಯತ್ನಿಸಿದರೂ ಸಾಧ್ಯವಾಗಲಿಲ್ಲ. ಕೆಲವೇ ನಿಮಿಷಗಳಲ್ಲಿ ಕಾಟೆ‍ಪ್ಪ ದೂರ ತೇಲಿಕೊಂಡು ಹೋದರು. ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಹುಡುಕಾಟ ನಡೆಸಿದರು. ಮಳೆಯ ಕಾರಣ ಕಾರ್ಯಾಚರಣೆ ಸ್ಥಗಿತಗೊಂಡಿದ್ದು, ಬೆಳಿಗ್ಗೆ ಮತ್ತೆ ಆರಂಭಿಸಲಾಗುವುದು ಎಂದು ಗೋಕಾಕ ಠಾಣೆ ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *