ಗದಗ ಜಿಲ್ಲೆಯಲ್ಲೂ ಸಹ ಮಳೆ ಆರ್ಭಟ ಜೋರಾಗಿದ್ದು, ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ವ್ಯಕ್ತಿಯೋರ್ವ ಕೊಚ್ಚಿ ಹೋಗಿದ್ದಾರೆ. ಗದಗ ತಾಲೂಕಿನ ಬೆನಕೊಪ್ಪ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, 39 ವರ್ಷದ ಶರಣಪ್ಪ ಹಡಗಲಿ ಎಂಬುವವರು ಬೈಕ್‌ನಲ್ಲಿ ತುಂಬಿ ಹರಿಯುತ್ತಿದ್ದ ಹಳ್ಳ ದಾಟಲು ಹೋಗಿ ನೀರು ಪಾಲಾಗಿದ್ದಾರೆ.ಬೆನಕೊಪ್ಪ ಗ್ರಾಮದಲ್ಲೇ ಇದ್ದ ತನ್ನ ಪತ್ನಿಯ ಮನೆಗೆ ತೆರಳುತ್ತಿದ್ದ ಶರಣಪ್ಪ ಹಡಗಲಿ ನೀರಿನಿಲ್ಲಿ ಕೊಚ್ಚಿ ಹೋದ ಬಳಿಕ ಸ್ಥಳಕ್ಕಾಗಮಿಸಿದ ಶೋಧ ಆರಂಭಿಸಿದ್ದರು. ಗದಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

