Breaking News

ಮೊಳಕಾಲ್ಮುರು:ಲವ್ ಬ್ರೇಕ್ ಅಪ್, ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ!!

ನಾಗಸಮುದ್ರ ಗ್ರಾಮದ ಯುವತಿಯೊಬ್ಬರು ಪ್ರೀತಿಸಿದ ಯುವಕ ಮದುವೆಯಾಗಲು ನಿರಾಕರಿಸಿದ ಎಂಬ ಕಾರಣಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ರಾಂಪುರ ಗ್ರಾಮದ ಭಾರ್ಗವ ರೆಡ್ಡಿ ಪರಿಚಯವಾಗಿತ್ತು. ನಂತರ ಇಬ್ಬರೂ ಪ್ರೀತಿಸುತ್ತಿದ್ದರು. ಬಳಿಕ ಭಾರ್ಗವರೆಡ್ಡಿ, ‘ನಿಮ್ಮದು ನಮ್ಮದು ಬೇರೆ ಬೇರೆ ಜಾತಿ. ಮದುವೆಯಾದಲ್ಲಿ ಸಮಸ್ಯೆಯಾಗುತ್ತದೆ’ ಎಂದು ನಿರಾಕರಿಸಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪಾಲಕರು ದೂರಿನಲ್ಲಿ ತಿಳಿಸಿದ್ದಾರೆ.ಭಾರ್ಗವರೆಡ್ಡಿ ಮತ್ತು ಪಾಲಕರ ವಿರುದ್ಧ ಕ್ರಮ ಕೊಳ್ಳಬೇಕು ಎಂದು ಆಗ್ರಹಿಸಿ ಅಂಜಲಿ ಸಂಬಂಧಿಕರು ಕೆಲಕಾಲ ರಾಂಪುರ ಆಸ್ಪತ್ರೆ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಪೊಲೀಸರು ಸ್ಥಳಕ್ಕೆ ಬಂದು ಕ್ರಮದ ಭರವಸೆ ನೀಡಿದ ನಂತರ ಪ್ರತಿಭಟನೆ ಕೈಬಿಟ್ಟರು.ಈ ಸಂಬಂಧ ರಾಂಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

80s ಫೋಟೋ ಟ್ರೆಂಡ್‌ನಲ್ಲೂ ಸೈಬರ್ ವಂಚಕರ ಕನ್ನ: ಹಣ ಕೊಡದಿದ್ದಕ್ಕೆ ಬೆತ್ತಲೆ ಫೋಟೋ ಹರಿಬಿಟ್ಟ ವಂಚಕರು

ಬೆಂಗಳೂರು ಉತ್ತರ ತಾಲೂಕಿನ ಬಾಗಲಗುಂಟೆಯ ವಿನೋದ್ (45) ಎಂಬುವರು 80ರ ದಶಕದ ಶೈಲಿಯಲ್ಲಿ ಫೋಟೋ ಎಡಿಟ್ ಮಾಡಲು ನಕಲಿ ಆ್ಯಪ್ …

Leave a Reply

Your email address will not be published. Required fields are marked *