ಬಾಲಕಿಯನ್ನ ಮಾರಕಾಸ್ತ್ರಗಳಿಂದ ಹೊಡೆದು ಭೀಕರವಾಗಿ ಹತ್ಯೆ ಮಾಡಿರೋ ಘಟನೆ ರಾಮನಗರ ತಾಲೂಕಿನ ಭದ್ರಾಪುರ ಹಕ್ಕಿಪಿಕ್ಕಿ ಕಾಲೋನಿ ಬಳಿ ನಡೆದಿದೆ. ದುಷ್ಕರ್ಮಿಗಳು 14 ವರ್ಷದ ವಿಕಲಚೇತನ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನೆಯನ್ನ ಖಂಡಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.ರಾತ್ರಿ ಎಷ್ಟು ಹೊತ್ತಾದರೂ ಸಹಾ ಮನೆಗೆ ಆಕೆ ಬಂದಿರಲಿಲ್ಲ. ಹೀಗಾಗಿ ಕುಟುಂಬಸ್ಥರು, ಸಂಬಂಧಿಕರು ಸಾಕಷ್ಟು ಹುಡುಕಾಟ ನಡೆಸಿದ್ದಾರೆ. ಆದರೆ ಮಾರನೇ ದಿನ ಬೆಳಗ್ಗೆ ಗ್ರಾಮದ ರೈಲ್ವೆ ಟ್ರಾಕ್ ಪಕ್ಕದಲ್ಲಿ ಮೃತದೇಹ ಪತ್ತೆಯಾಗಿದೆ. ಯಾರೋ ದುಷ್ಕರ್ಮಿಗಳು ಬಾಲಕಿಯನ್ನ ಕರೆದೊಯ್ದು ಮಾರಕಾಸ್ತ್ರಗಳಿಂದ ಹೊಡೆದು ಹತ್ಯೆ ಮಾಡಿ ಪರಾರಿಯಾಗಿದ್ದಾರೆ.ಇನ್ನೂ ಬಿಡದಿ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಶ್ವಾಸದಳ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

