ಆರು ವರ್ಷಗಳ ಹಿಂದೆ ತಮಿಳುನಾಡಿನ ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಮತ್ತು ಸುಲಿಗೆ ಪ್ರಕರಣದಲ್ಲಿ ಬಂಧಿತರಾಗಿದ್ದ 9 ಆರೋಪಿಗಳನ್ನು ಅಪರಾಧಿಗಳು ಎಂದು ಪರಿಗಣಿಸಿದ ಮಹಿಳಾ ನ್ಯಾಯಾಲಯ, ಜೀವ ಇರುವವರೆಗೂ ಕಾರಾಗೃಹ ಶಿಕ್ಷೆ ವಿಧಿಸಿ ಮಂಗಳವಾರ ಆದೇಶಿಸಿದೆ.ನ್ಯಾಯಾಧೀಶೆ ಆರ್. ನಂದಿನಿ ದೇವಿ ಅವರು ಶಿಕ್ಷೆಯ ಆದೇಶ ಪ್ರಕಟಿಸಿ, ಜೀವಾವಧಿ ಶಿಕ್ಷೆಯ ಜತೆಗೆ, ಎಂಟು ಸಂತ್ರಸ್ತರಿಗೆ ₹85 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿದ್ದಾರೆ.ಪ್ರಕರಣದಲ್ಲಿ ಒಟ್ಟು 48 ಸಾಕ್ಷಿಗಳಿದ್ದರು. ಸಂತ್ರಸ್ತ ಮಹಿಳೆಯರು ಚಿಕ್ಕ ವಯಸ್ಸಿನವರು ಮತ್ತು ವಯಸ್ಸಾದ ಪಾಲಕರನ್ನು ಗಮದಲ್ಲಿಟ್ಟುಕೊಂಡು ಖುದ್ದು ಹಾಜರಿಯಿಂದ ಅವರಿಗೆ ವಿನಾಯಿತಿ ನೀಡಲಾಗಿತ್ತು. ಎಲೆಕ್ಟ್ರಾನಿಕ್ ಸಾಕ್ಷಿಗಳ ಮೂಲಕ ಪ್ರಕರಣವನ್ನು ವೈಜ್ಞಾನಿಕವಾಗಿ ಸಾಬೀತುಪಡಿಸಲಾಯಿತು. ತನಿಖೆಯಲ್ಲಿ ಸಿಬಿಐ ಯಾವ ಪ್ರಯತ್ನವೂ ವ್ಯರ್ಥವಾಗಲಿಲ್ಲ. ಕೊನೆಗೂ ನ್ಯಾಯ ದೊರಕಿತು’ ಎಂದು ದಿಶಾ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

