Breaking News

ಕನಕಪುರ :ಪ್ರಯಾಣಿಕರೊಬ್ಬರು ಬಿಟ್ಟು ಹೋಗಿದ್ದ ಚಿನ್ನಾಭರಣಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ KSRTC ಚಾಲಕ ಹಾಗೂ ನಿರ್ವಾಹಕರು.

.ಎಸ್.ಆರ್.ಟಿ.ಸಿ ಬಸ್‌ನಲ್ಲಿ ಪ್ರಯಾಣಿಕರೊಬ್ಬರು ಬಿಟ್ಟು ಹೋಗಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ನಗರ ಬಸ್ ಡಿಪ್ಪೋಗೆ ತಂದೊಪ್ಪಿಸಿ ಮಾನವೀಯತೆ ಮೆರೆದ ಚಾಲಕ ಹಾಗೂ ನಿರ್ವಾಹಕರು ಪ್ರಯಾಣಿಕರ ಪ್ರಶಂಸೆಗೆ ಒಳಗಾಗಿದ್ದಾರೆ.ಬಸ್‌ನಲ್ಲಿ ಪ್ರಾಯಾಣಿಸುತ್ತಿದ್ದ ಒಡವೆ ಮಾಲೀಕರಾದ ಚಿನ್ನಮ್ಮ ಕುಟುಂಬದ ಸದಸ್ಯರು ಘಟಕಕ್ಕೆ ಭೇಟಿ ನೀಡಿ ವಿಚಾರಿಸಿದಾಗ ವಿಷಯವನ್ನು ಕೂಲಂಕುಷವಾಗಿ ಪರಿಶೀಲಿಸಿದ ಅಧಿಕಾರಿಗಳು ಅವರ ಚಿನ್ನಾಭರಣಗಳನ್ನು ಕುಟುಂಬದ ಸದಸ್ಯರಿಗೆ ಹಸ್ತಾಂತರಿಸಿದರು.75 ಗ್ರಾಂ ತೂಕದ 6 ಲಕ್ಷ ರೂ. ಮೌಲ್ಯದ ಚಿನ್ನಾಭರಣದ ಬ್ಯಾಗನ್ನು ಬಸ್‌ನಲ್ಲಿಯೇ ಬಿಟ್ಟು ತೆರಳಿದ್ದರು.ಕನಕಪುರ ಘಟಕ ವಿಭಾಗದ ವ್ಯವಸ್ಥಾಪಕ ನರಸಿಂಹರಾಜು, ಸಹಾಯಕ ಸಂಚಾರ ನಿಯಂತ್ರಕಿ ಶೋಭ ಹಾಗೂ ಬಸ್ಸಿನ ಚಾಲಕ ದಾಸಪ್ಪ, ನಿರ್ವಾಹಕ ಶಿವಕುಮಾ‌ರ್, ಶಿವರುದ್ರಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *