Breaking News

ಬೆಂಗಳೂರು: ದುಷ್ಟಶಕ್ತಿ ಓಡಿಸುತ್ತೇನೆಂದು ಹೋಟೆಲ್​ನಲ್ಲಿ ಪೂಜೆ, ಮಹಿಳೆಗೆ 5 ಲಕ್ಷ ರೂ. ವಂಚಿಸಿದ ಜ್ಯೋತಿಷಿ!

ದುಷ್ಟಶಕ್ತಿಯನ್ನು ಓಡಿಸುತ್ತೇನೆ ಎಂದು ಜ್ಯೋತಿಷಿ ಬೆಂಗಳೂರಿನ ವಿಭೂತಿಪುರದ ನಿವಾಸಿಯಾಗಿರುವ 33 ವರ್ಷದ ಮಹಿಳೆಯಿಂದ ಐದು ಲಕ್ಷ ರೂ. ಪಡೆದು ವಂಚಿಸಿದ್ದಾನೆ. ವಂಚಕನ ವಿರುದ್ಧ ವಂಚನೆಗೊಳಗಾದ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ.ಜ್ಯೋತಿಷಿ ಮೊದಲಿಗೆ ನಿಂಬೆ ಹಣ್ಣುಗಳನ್ನು ಕತ್ತರಿಸಿ, ಧೂಪ ಹಚ್ಚಿದ್ದಾನೆ. ನಂತರ ಮಹಿಳೆಯ ಮುಖಕ್ಕೆ ಬೂದಿ ಎರಚಿದ್ದಾನೆ. ನಂತರ, ಮಹಿಳೆಗೆ ನವಿಲು ಗರಿಗಳಿಂದ ಹೊಡೆದು, ಅವರ ಕೂದಲನ್ನು ಹಿಡಿದು “ಆತ್ಮ ದೂರ ಹೋಗು” ಎಂದು ಕಿರಿಚಿದ್ದಾನೆ. ಪೂಜೆಗಳೆಲ್ಲ ಮುಗಿದ ನಂತರ ದುಷ್ಟಶಕ್ತಿಗಳು ನಿಮ್ಮನ್ನು ಬಿಟ್ಟು ಹೋದವು ಎಂದಿದ್ದಾನೆ.ಆದರೆ, ಮಹಿಳೆಯ ಆರೋಗ್ಯದಲ್ಲಿ ಮಾತ್ರ ಯಾವುದೇ ಸುಧಾರಣೆ ಕಂಡುಬಂದಿಲ್ಲ. ಈ ಹಿನ್ನೆಲೆಯಲ್ಲಿ ಮಹಿಳೆ ಹಣ ಮರುಪಾವತಿಸುವಂತೆ ಜ್ಯೋತಿಷಿಗೆ ಸಂಪರ್ಕಿಸಲು ಯತ್ನಿಸಿದರು. ಆದರೆ, ಜ್ಯೋತಿಷಿ ಮಾತ್ರ ಮಹಿಳೆಯ ಸಂಪರ್ಕಕ್ಕೆ ಸಿಗದೆ ತಲೆಮರೆಸಿಕೊಂಡಿದ್ದಾನೆ. ನಂತರ ಮಹಿಳೆ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *