Breaking News

ಯಾದಗಿರಿ : ಅಳಿಯನನ್ನೇ ಕೊಚ್ಚಿ ಕೊಲೆ ಮಾಡಿದ ಮಾವ!

ಸಾಲದ ವಿಚಾರಕ್ಕೆ ಮಾವ ಅಳಿಯನನ್ನೇ ಕೊಚ್ಚಿ ಕೊಲೆ ಮಾಡಿರುವ ಘಟನೆ ಹುಣಸಗಿ ತಾಲೂಕಿನ ಶಾಖಾಪುರ(ಎಸ್.ಕೆ) ಗ್ರಾಮದಲ್ಲಿ ನಡೆದಿದೆ. ಲಕ್ಷ್ಮಣ ಚಿಗರಿಹಾಳ (28) ಮೃತ ದುರ್ದೈವಿ. ಸೋದರ ಮಾವ ಮಾನಪ್ಪ ಕೊಲೆ ಮಾಡಿದ ಆರೋಪಿ.ಕೊಟ್ಟ ಸಾಲ ವಾಪಸ್ ಕೊಡುವಂತೆ ಕೇಳಿದ್ದಕ್ಕೆ ಲಕ್ಷ್ಮಣ ಚಿಗರಿಹಾಳ ಮಾವ ಮಾನಪ್ಪಗೆ ಕೇಳಿದ್ದರು. ಇಷ್ಟಕ್ಕೆ ಬಹಿರ್ದೆಸೆಗೆ ತೆರಳುತ್ತಿದ್ದ ಅಳಿಯ ಲಕ್ಷ್ಮಣ ಚಿಗರಿಹಾಳನನ್ನು ಕೊಡಲಿಯಿಂದ ಕೊಚ್ಚಿ ಮಾವ ಮಾನಪ್ಪ ಕೊಲೆ ಮಾಡಿದ್ದಾನೆ. ಸ್ಥಳಕ್ಕೆ ಎಸ್​​ಪಿ ಪೃಥ್ವಿಕ್ ಶಂಕರ್, ಡಿವೈಎಸ್​ಪಿ ಜಾವೀದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಮಾನಪ್ಪನನ್ನು ಪೋಲಿಸರು ಬಂಧಿಸಿದ್ದಾರೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *