ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕಲ್ಲಹಳ್ಳಿ ಪ್ರಪಾತದಲ್ಲಿ ಮೃತದೇಹವೊಂದು ಪತ್ತೆಯಾಗಿದೆ. ಮೃತದೇಹದ ಪರಿಶೀಲನೆ ನಡೆಸಿದಾಗ ಆತ ಕೊಡಗು ಜಿಲ್ಲೆಯ ಸಂಪತ್ ಎಂದು ತಿಳಿದುಬಂದಿದೆ.ಕಲ್ಲಹಳ್ಳಿ ಗ್ರಾಮದ ಬಳಿ ಕಾರು ಪತ್ತೆಯಾಗಿತ್ತು. ಕಾರಿನಲ್ಲಿ ರಕ್ತ ಹರಿದಿರುವುದನ್ನು ಗಮನಿಸಿದ್ದ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಯಸಳೂರು ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದರು. ಅತ್ತ, ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಸಂಪತ್ ಕಾಣೆಯಾದ ಬಗ್ಗೆ ದೂರು ದಾಖಲಾಗಿತ್ತು.ಮೇಲ್ನೋಟಕ್ಕೆ ಯಾರೋ ಸಂಪತ್ ಅವರನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿ, ಬಳಿಕ ಅವರದ್ದೇ ಕಾರಿನಲ್ಲಿ ಶವ ತಂದು ಬಿಸಾಡಿದ್ದಾರೆ ಎಂದು ತಿಳಿದುಬಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

