Breaking News

ಬೆಂಗಳೂರು :ಡಿವೈಡರ್‌ಗೆ ಬಸ್‌ ಡಿಕ್ಕಿ, ದೇವನಹಳ್ಳಿ ಏರ್‌ಪೋರ್ಟ್‌ ಸಿಬ್ಬಂದಿ ಸಾವು!

ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಉರುಳಿಬಿದ್ದ ಪರಿಣಾಮ ಓರ್ವ ಸಾವನ್ನಪ್ಪಿ, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ 33 ಮಂದಿ ಸಿಬ್ಬಂದಿಗಳು ಗಾಯಗೊಂಡಿರುವ ಘಟನೆ ದೇವನಹಳ್ಳಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಬೇಗೂರು ಸಿಐಎಸ್‌ಎಫ್ ಜಂಕ್ಷನ್ ಬಳಿ ಮಂಗಳವಾರ ನಡೆದಿದೆ.ತೀವ್ರವಾಗಿ ಗಾಯಗೊಂಡಿದ್ದ ಸಂತೋಷ್ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ.ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಾಳುಗಳಲ್ಲಿ ಕೆಲವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಇತರರನ್ನು ಬಿಡುಗಡೆ ಮಾಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *