Breaking News

ತುಮಕೂರು :ಗಾಂಜಾ ಮಾರಾಟ, ಇಬ್ಬರು ಬಂಧನ!!

ಬಟವಾಡಿ ಕೆಳ ಸೇತುವೆ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಹೊಸ ಬಡಾವಣೆ ಠಾಣೆ ಪೊಲೀಸರು, ₹1.10 ಲಕ್ಷ ಮೌಲ್ಯದ 1 ಕೆ.ಜಿ 300 ಗ್ರಾಂ ಗಾಂಜಾ ಸೊಪ್ಪು ಜಪ್ತಿ ಮಾಡಿದ್ದಾರೆ.ಇಬ್ಬರು ಪ್ರತಿ ಸೋಮವಾರ ಬಟವಾಡಿ ಬಳಿ ವ್ಯಕ್ತಿಯೊಬ್ಬರಿಂದ ಗಾಂಜಾ ಖರೀದಿಸುತ್ತಿದ್ದರು. ಅದನ್ನು ನಗರದ ವಿವಿಧೆಡೆ ಮಾರಾಟ ಮಾಡುತ್ತಿದ್ದರು. ಸೋಮವಾರ ಸಂಜೆ ಬ್ಯಾಗ್‌ನಲ್ಲಿ ಗಾಂಜಾ ಸೊಪ್ಪು ಹಿಡಿದುಕೊಂಡು ನಿಂತಿದ್ದರು.ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿ, ನ್ಯಾಯಾಲಯದ ಮುಂದೆ ಹಾಜರು ಪಡಿಸಿದರು. ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಹೊಸ ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ರಾಜೀವ್‌ಗಾಂಧಿ ನಗರದ ತೌಸಿಫ್‌ಪಾಷ, ಗುಬ್ಬಿ ಗೇಟ್‌ನ ವಸೀಂ ಅಕ್ರಂ ಬಂಧಿತರು.

Share News

About BigTv News

Check Also

3 ವರ್ಷದಿಂದ ಪ್ರೀತಿಸುವಂತೆ ಕಿರುಕುಳ: ಒಪ್ಪದಿದ್ದಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಯುವತಿಯನ್ನು ತಬ್ಬಿಕೊಂಡ ಯುವಕ!

ಮೈಸೂರು: ಪ್ರೇಮ ನಿರಾಕರಿಸಿದ್ದ ಯುವತಿಗೆ ಕಿರುಕುಳ ನೀಡುತ್ತಿದ್ದ ಆರೋಪದ ಯುವಕನೊಬ್ಬ, ಮೈಸೂರಿನ ವಿಜಯನಗರದ ಡಿಪ್ಲೊಮಾ ಕಾಲೇಜು ಹಾಸ್ಟೆಲ್ ಬಳಿ ಬೆಂಕಿಯಿಂದ …

Leave a Reply

Your email address will not be published. Required fields are marked *