Breaking News

ದಾವಣಗೆರೆ :ಕಾರು-ಬೈಕ್ ಮುಖಾಮುಖಿ ಡಿಕ್ಕಿ, ಇಬ್ಬರು ಯುವತಿಯರು ಸಾವು!

ಕಾರು-ಬೈಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವತಿಯರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹರಿಹರ ತಾಲೂಕಿನ ಕಡರನಾಯ್ಕನಹಳ್ಳಿ ಗ್ರಾಮದಲ್ಲಿ ಜರುಗಿದೆ.ಸುಮಾ, ಪಲ್ಲವಿ ಮೃತ ದುರ್ದೈವಿಗಳು. ರಾಣೇಬೆನ್ನೂರು ತಾಲೂಕಿನ ತುಮ್ಮಿನಕಟ್ಟಿ ಗ್ರಾಮದ ಬೈಕ್ ಸವಾರ ಸಚಿನ್‌ಗೆ ಗಂಭೀರ ಗಾಯಗಳಾಗಿವೆ.ಸಚಿನ್ ಬುಧವಾರ ಸಂಜೆ ಸಂಬಂಧಿಗಳಾದ ಸುಮಾ ಮತ್ತು ಪಲ್ಲವಿಯನ್ನು ಬೈಕ್‌ನಲ್ಲಿ ಕರೆದುಕೊಂಡು ಬರುವಾಗ ಎದುರುಗಡೆಯಿಂದ ಬಂದ ಕಾರು ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಇಬ್ಬರು ಯುವತಿಯರು ರಸ್ತೆಗೆ ಎಸೆಯಲ್ಪಟ್ಟಿದ್ದರು. ಸುಮಾ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಭೀರ ಗಾಯಗಳಾಗಿದ್ದ ಪಲ್ಲವಿಯನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮರಣ ಹೊಂದಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *