ಎರಡು ಬೈಕ್‌ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಜೆಡಿಎಸ್ ಮುಖಂಡ ಸಾವನ್ನಪ್ಪಿರುವ ಘಟನೆ ತಾಲೂಕಿನ ಹೊಸಹೊಳಲು- ಕತ್ತರಘಟ್ಟ ಗೇಟ್ ಬಳಿಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ತಾಲೂಕಿನ ಹೊಸಹೊಳಲು ಗ್ರಾಮದ ಜೆಡಿಎಸ್ ಮುಖಂಡ ಬಾಲಕೃಷ್ಣ (55) ಮೃತಪಟ್ಟವರು.ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮತ್ತೋರ್ವ ಬೈಕ್ ಸವಾರನನ್ನು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಬೆಂಗಳೂರು-ಜಲಸೂರು ಮಾರ್ಗದ ರಾಜ್ಯ ಹೆದ್ದಾರಿ ಬಳಿ ಘಟನೆ ನಡೆದಿದ್ದು, ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

