Breaking News

ಪುಲ್ವಾಮಾ: ಬೆಳ್ಳಂಬೆಳಗ್ಗೆ ಗುಂಡಿನ ಸದ್ದು – ಸಿಕ್ಕಿಬಿದ್ದ ಮೂರು ಉಗ್ರರು!!

ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಟ್ರಾಲ್ ಪ್ರದೇಶದ ನಾದಿರ್ ಗ್ರಾಮದಲ್ಲಿ ಬೆಳ್ಳಂಬೆಳಗ್ಗೆ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಎರಡರಿಂದ ಮೂರು ಜನ ಸಿಕ್ಕಿಬಿದ್ದಿದ್ದಾರೆ ಎಂದು ವರದಿಯಾಗಿದೆ.ಕಳೆದ 48 ಗಂಟೆಗಳ ಒಳಗೆ ಈ ಪ್ರದೇಶದಲ್ಲಿ ನಡೆದ ಎರಡನೇ ಎನ್‌ಕೌಂಟರ್ ಇದಾಗಿದ್ದು, ಈ ಹಿಂದೆ ಶೋಪಿಯಾನ್ ಜಿಲ್ಲೆಯ ಕೆಲ್ಲರ್ ಪ್ರದೇಶದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಮೂವರು ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರನ್ನು ಹೊಡೆದುರುಳಿಸಿದ್ದರು.ಇದಕ್ಕೆ ಭದ್ರತಾ ಪಡೆಗಳು ಕೂಡ ಪ್ರತ್ಯುತ್ತರ ನೀಡುತ್ತಿದ್ದಾರೆ ಎಂದು ಜಮ್ಮು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.ಅಲ್ಲದೇ ಮನೆಯೊಳಗೆ ಅವಿತಿರುವ ಉಗ್ರರನ್ನು ಜೈಶ್-ಎ-ಮೊಹಮ್ಮದ್‌ ಸಂಘಟನೆಗೆ ಸೇರಿದವರು ಎಂದು ತಿಳಿದು ಬಂದಿದೆ.

Share News

About BigTv News

Check Also

ಶಾಸಕ ಸುನಿಲ್ ಕುಮಾರ್ ವಿರುದ್ಧ ಆಕ್ಷೇಪಾರ್ಹ ಪೋಸ್ಟ್: ಕಾಂಗ್ರೆಸ್ ಕಾರ್ಯಕರ್ತ ವಶಕ್ಕೆ

ಉಡುಪಿ: ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಹಾಗೂ ಪ್ರಚೋದನಕಾರಿ …

Leave a Reply

Your email address will not be published. Required fields are marked *