Breaking News

ಲಕ್ನೋ: ಚಲಿಸುತ್ತಿದ್ದ ಬಸ್ ನಲ್ಲಿ ಬೆಂಕಿ, ಇಬ್ಬರು ಮಕ್ಕಳು ಸೇರಿದಂತೆ ಐವರು ಸಜೀವ ದಹನ.!

ಚಲಿಸುತ್ತಿದ್ದ ಬಸ್‌ನಲ್ಲಿ ಭೀಕರ ಬೆಂಕಿ ಕಾಣಿಸಿಕೊಂಡಿದ್ದು, ಇಬ್ಬರು ಮಕ್ಕಳು, ಇಬ್ಬರು ಮಹಿಳೆಯರು ಮತ್ತು ಒಬ್ಬ ಪುರುಷ ಸೇರಿದಂತೆ ಐದು ಪ್ರಯಾಣಿಕರು ಸಾವನ್ನಪ್ಪಿದ್ದಾರೆ.ಬಿಹಾರದಿಂದ ದೆಹಲಿಗೆ ತೆರಳುತ್ತಿದ್ದ ಬಸ್ಸಿನಲ್ಲಿ ಬೆಳಿಗ್ಗೆ 5 ಗಂಟೆ ಸುಮಾರಿಗೆ ಮೋಹನ್ ಲಾಲ್ ಗಂಜ್ ಬಳಿಯ ಕಿಸಾನ್ ಪಥ್ ನಲ್ಲಿ ಹಠಾತ್ತನೆ ಬೆಂಕಿ ಕಾಣಿಸಿಕೊಂಡಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.ಬೆಂಕಿಯ ಸುದ್ದಿ ತಿಳಿದ ನಂತರ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಪೊಲೀಸರು ಮತ್ತು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು. ಅಗ್ನಿಶಾಮಕ ದಳದವರು 30 ನಿಮಿಷಗಳಲ್ಲಿ ಬೆಂಕಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾದರು, ಆದರೆ ಆ ಹೊತ್ತಿಗೆ, ಇಡೀ ಬಸ್ ಬೂದಿಯಾಗಿತ್ತು.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *