Breaking News

ಉಡುಪಿ :ಮಲ್ಪೆ ಬಂದರಿನಲ್ಲಿ ಬಾಂಬ್ ಸ್ಫೋಟ, ಐವರು ಗಂಭೀರ..!

ಮಲ್ಪೆ ಬಂದರಿನಲ್ಲಿ ಮಂಗಳವಾರ ಸಂಜೆ ಬಾಂಬ್ ಸ್ಪೋಟದ ಸದ್ದು ಮೊಳಗಿದೆ. ಸ್ಫೋಟದ ತೀವ್ರತೆಗೆ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳ ಬೆಂಕಿಯನ್ನು ನಂದಿಸಿದ್ದಾರೆ. ಗಾಯಗೊಂಡ ಐವರು ಮೀನುಗಾರರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಇದು ನಿಜ ಘಟನೆ ಅಲ್ಲ. ಸಂಭಾವ್ಯ ಆತಂಕದ ಹಿನ್ನೆಲೆಯಲ್ಲಿ ನಡೆದ ಅಣಕು ಪ್ರದರ್ಶನ.ಹೌದು, ಮಲ್ಪೆ ಮೀನುಗಾರರ ಸಂಘ, ಕರಾವಳಿ ಕಾವಲು ಪಡೆ, ಆರೋಗ್ಯ ಇಲಾಖೆ, ಮೀನುಗಾರಿಕಾ ಇಲಾಖೆ, ಅಗ್ನಿಶಾಮಕ ದಳ ಹಾಗೂ ಕಸ್ಟಮ್ಸ್ ವತಿಯಿಂದ ಜಂಟಿಯಾಗಿ ಮಲ್ಪೆ ಬಂದರಿನಲ್ಲಿ ಅಣಕು ಕಾರ್ಯಾಚರಣೆ ನಡೆಯಿತು.ಕರಾವಳಿ ಕಾವಲು ಪಡೆಯ ಸಿಬ್ಬಂದಿಗಳು ಬೋಟ್‌ನಲ್ಲಿ ಶಸ್ತ್ರಸಜ್ಜಿತರಾಗಿ ಬಂದರಿನ ಸುತ್ತಲೂ ಗಸ್ತು ತಿರುಗುವ ಮೂಲಕ ವಿಶೇಷ ಸನ್ನಿವೇಶದಲ್ಲಿ ಇಲಾಖೆಯ ಕಾರ್ಯದ ಬಗ್ಗೆ ಅರಿವು ಮೂಡಿಸಿದರು. ಕರಾವಳಿ ಕಾವಲು ಪಡೆಯ ಪೋಲಿಸ್ ನಿರೀಕ್ಷಕರಾದ ಪ್ರಮೋದ್, ಸೀತರಾಮ್, ಪಿಎಸ್‌ಐ ಫೆಮಿನಾ ಸೇರಿದಂತೆ ಮೊದಲಾದ ಅಧಿಕಾರಿಗಳು ಹಾಜರಿದ್ದರು.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *