Breaking News

ಹುಣಸಗಿ : ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಮಾವನಿಂದಲೇ ಕೊಡಲಿಯಿಂದ ಕೊಚ್ಚಿ ಅಳಿಯನ ಕೊಲೆ!

ಮಾವನಿಂದಲೇ ಅಳಿಯನನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಕೊಲೆ ನಡೆದ ಘಟನೆ ಹುಣಸಗಿ ತಾಲೂಕಿನ ಶಖಾಪುರ ಎಸ್.ಕೆ.ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ.ಆರೋಪಿ ಮಾನಪ್ಪ ಹಳ್ಳೆಪ್ಪ ವಡಗೇರಿ ಅವರನ್ನು ಪೊಲೀಸ್‌ರು ವಶಕ್ಕೆ ತೆಗೆದುಕೊಂಡು ನ್ಯಾಯಾಂಗದ ಬಂಧನಕ್ಕೆ ಒಪ್ಪಿಸಿದ್ದಾರೆ.ಘಟನೆ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್‌ಶಂಕರ್, ಡಿವೈಎಸ್ಪಿ ಜಾವೀದ್ ಇನಾಮದಾರ್, ಹುಣಸಗಿ ಸಿಪಿಐ ರವಿಕುಮಾರ ಎಸ್.ಎನ್, ಪಿಎಸ್‌ಐ ಅಮೋಜ್ ಕಾಂಬಳೆ ಭೇಟಿ ನೀಡಿ ಪರಿಶೀಲನೆ ನಡೆಸಿ ದೂರಿನನ್ವಯ ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಲಕ್ಷ್ಮಣ್ಣ ಚಿಗರಿಹಾಳ(28) ಎಂಬಾತನೇ ಕೊಲೆಗೀಡಾದ ವ್ಯಕ್ತಿ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *