ಗಂಗಾವತಿ ತಾಲೂಕಿನ ಹಣವಾಳ ಗ್ರಾಮದಲ್ಲಿ ನಡೆದ ಯುವಕನ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಮೊಬೈಲ್ ನೆಟ್ವರ್ಕ್ ಮತ್ತು ಕಾಲ್ ರೆಕಾರ್ಡ್‌ಗಳ ಸಹಾಯದಿಂದ ಆರೋಪಿಗಳನ್ನು ಬಂಧಿಸಲಾಗಿದೆ.ಕೊಲೆಯಾದ ಸುರೇಶ್‌ನ ಮೊಬೈಲ್ ನೆಟ್ವರ್ಕ್ ಮತ್ತು ಕಾಲ್ ರೆಕಾರ್ಡ್‌ಗಳನ್ನು ಪರಿಶೀಲಿಸಿದ ಗಂಗಾವತಿ ಗ್ರಾಮೀಣ ಠಾಣೆ ಪೊಲೀಸರು, ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಕೊಲೆ ಆರೋಪಿಗಳಾದ ಶಿವಕುಮಾರ್, ಮಂಜುನಾಥ್, ಮಹೇಶ್ವರಿ ಮತ್ತು ಅಮರೇಶ್‌ರನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರೆದಿದೆ. ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

