Breaking News

ಬೆಂಗಳೂರು: ಪೇಂಟರ್ ಕೊಲೆ, ಆರೋಪಿಗಳು ಪರಾರಿ!

ಪಾರ್ಟಿ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೇಳೆ ನಡೆದ ಗಲಾಟೆಯಲ್ಲಿ ಸ್ನೇಹಿತನನ್ನು ಕೊಲೆ ಮಾಡಿದ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಅಮೃತಹಳ್ಳಿ ಪೊಲೀಸರು ಆರೋಪಿಗಳಿಗೆ ಹುಡುಕಾಟ ನಡೆಸುತ್ತಿದ್ದಾರೆ.ತಡರಾತ್ರಿವರೆಗೂ ಅಹಮದ್‌ ಅಜೀಜ್‌ ಹಾಗೂ ಅವರ ಇಬ್ಬರು ಸ್ನೇಹಿತರು ಪಾರ್ಟಿ ಮಾಡಿದ್ದರು. ಪಾರ್ಟಿ ವೇಳೆ ಮೂವರ ಮಧ್ಯೆ ಗಲಾಟೆ ನಡೆದಿತ್ತು. ಅದಾದ ಮೇಲೆ ರಸ್ತೆಯಲ್ಲಿ ನಡೆದು ಹೋಗುವಾಗ ಇಬ್ಬರು ಆರೋಪಿಗಳು ಸೇರಿಕೊಂಡು, ಅಜೀಜ್‌ ಹಲ್ಲೆ ನಡೆಸಿದ್ದರು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಜೀಜ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದರು. ಬುಧವಾರ ಬೆಳಿಗ್ಗೆ ಅವರು ಮೃತಪಟ್ಟಿದ್ದಾರೆ. ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.ಕಾವೇರಿ ಲೇಔಟ್‌ನ ನಿವಾಸಿ, ಪೇಂಟಿಂಗ್ ಕೆಲಸ ಮಾಡುತ್ತಿದ್ದ ಅಹಮದ್‌ ಅಜೀಜ್(28) ಕೊಲೆಯಾದವರು

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *