ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಗುರುವಾರ ಬೆಳಗಿನ ಜಾವ ಚಲಿಸುತ್ತಿದ್ದ ಜೆಸಿಬಿ ವಾಹನಕ್ಕೆ ಹಿಂದಿನಿಂದ ವಿ ಆರ್ ಎಲ್ ಬಸ್ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಒಟ್ಟು ಎಂಟು ಜನ ತೀವ್ರವಾಗಿ ಗಾಯಗೊಂಡಿದ್ದಾರೆ.ಜೆಸಿಬಿ ವಾಹನದ ಚಾಲಕ ಗಂಗಾವತಿ ತಾಲ್ಲೂಕಿನ ವಡ್ಡರಹಟ್ಟಿಯ ಶರಣಪ್ಪ,ಬಸ್ ಚಾಲಕ ಮಲ್ಲಿಕಾರ್ಜುನ ಸೇರಿದಂತೆ ಬಸ್ ನಲ್ಲಿದ್ದ ಇತರೆ ಆರು ಜನ ಪ್ರಯಾಣಿಕರು ಗಾಯಗೊಂಡಿದ್ದು, ಹೊಸಪೇಟೆ ಸರ್ಕಾರಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಸುಮಾರು 32 ಜನ ಪ್ರಯಾಣಿಕರನ್ನು ಹೊತ್ತು ಬೆಂಗಳೂರಿನಿಂದ ಯಾದಗಿರಿಗೆ ಹೊರಟಿದ್ದ ವಿ ಆರ್ ಎಲ್ ಬಸ್, ಶಿವಮೊಗ್ಗದಿಂದ ಗಂಗಾವತಿಗೆ ಹೊರಟಿದ್ದ ಜೆಸಿಬಿ ವಾಹನಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಎರಡೂ ವಾಹನಗಳು ಹೆದ್ದಾರಿ ಬದಿಯ ಸುಮಾರು 10 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿವೆ ಎಂದು ಪೊಲೀಸರು ತಿಳಿಸಿದ್ದಾರೆ.ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

