Breaking News

ಕಲಬುರಗಿ: ಕೇಂದ್ರ ಕಾರಾಗೃಹದ ಕೈದಿಗಳಿಬ್ಬರ ನಡುವೆ ಗಲಾಟೆ, ಪ್ರಕರಣ ದಾಖಲು!

ನಗರದ ಹೊರವಲಯದಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಕೈದಿಯೋರ್ವನ ಮೇಲೆ ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಬುಧವಾರ ಪ್ರಕರಣ ದಾಖಲಾಗಿದೆ.ಅಲ್ಲದೇ, ಕಾರಾಗೃಹದ ನಿಯಮಗಳನ್ನು ಉಲ್ಲಂಘನೆ ಮಾಡಿರುವ ಕಾರಣಕ್ಕಾಗಿ ತುಳಸಿರಾಮ್ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.ಕೈದಿ ತುಳಸಿರಾಮ್ ಇನ್ನೋರ್ವ ವಿಚಾರಣಾ ಕೈದಿಯಾಗಿರುವ ಕಿರಣ್ ರಮೇಶ್ ಶೆಟ್ಟಿ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿ, ಗಾಯಗೊಳಿಸಿದ್ದಾನೆ. ತುಳಸಿರಾಮ್ ಮತ್ತು ಕಿರಣ್ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಏಕಾಏಕಿ ಇಬ್ಬರ ಮಧ್ಯೆ ಗಲಾಟೆ ನಡೆದಿದೆ. ಗಾಯಗೊಂಡ ಕಿರಣ್ ಶೆಟ್ಟಿಯನ್ನು ಕಾರಾಗೃಹದಲ್ಲೇ ಚಿಕಿತ್ಸೆ ಕೊಡಿಸಲಾಗಿದೆ ಎಂದು ತಿಳಿದುಬಂದಿದೆ.

Share News

About BigTv News

Check Also

ಚಿತ್ತಾಪುರದಲ್ಲಿ ರಸ್ತೆ ಕಾಮಗಾರಿ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ; ಹಲವರಿಗೆ ಗಾಯ

ಕಲಬುರಗಿ: ಚಿತ್ತಾಪುರ ತಾಲೂಕಿನ ರಾಂಪುರಹಳ್ಳಿಯಲ್ಲಿ ರಸ್ತೆ ಕಾಮಗಾರಿ ವಿಚಾರವಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಹಲವರು ಗಾಯಗೊಂಡಿದ್ದಾರೆ. ರಸ್ತೆ …

Leave a Reply

Your email address will not be published. Required fields are marked *