Breaking News

ವಿಜಯಪುರ: ‘ಲೋಕಾ’ ದಾಳಿ; ರೇಣುಕಾ ಮನೆಯಲ್ಲಿ ಅಪಾರ ನಗದು, ಬೆಳ್ಳಿ, ಬಂಗಾರ ಪತ್ತೆ!

ರೇಣುಕಾ ಸಾತರ್ಲೆ ಅವರ ವಿಜಯಪುರ ಮತ್ತು ಸೋಲಾಪುರ ನಗರದಲ್ಲಿರುವ ಮನೆಗಳ ಮೇಲೆ ಗುರುವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ₹2 ಕೋಟಿ ಮೊತ್ತದ ಅಕ್ರಮ ಆಸ್ತಿ ಪತ್ತೆ ಹಚ್ಚಿದ್ದಾರೆ.ವಿಜಯಪುರದ ಚಾಣಕ್ಯ ನಗರದಲ್ಲಿರುವ ಮನೆ ಹಾಗೂ ನೆರೆಯ ಮಹಾರಾಷ್ಟ್ರ ರಾಜ್ಯದ ಸೋಲಾಪುರ ನಗರದಲ್ಲಿರುವ ಮನೆ ಮೇಲೆ ದಾಳಿ ನಡೆಸಿ, ತಪಾಸಣೆ ನಡೆಸಿದರು.ದಾಳಿಯ ವೇಳೆ ₹ 10 ಲಕ್ಷ ನಗದು, ಬೆಳ್ಳಿ, ಬಂಗಾರದ ಆಭರಣಗಳು, ವಾಹನಗಳು ಮತ್ತು ಇತರೆ ಆಸ್ತಿಗಳಿಗೆ ಸಂಬಂಧಿಸಿದ ದಾಖಲೆ ಪತ್ರಗಳು ದೊರೆತಿದ್ದು, ಅಂದಾಜು ₹2 ಕೋಟಿಗೂ ಹೆಚ್ಚಿನ ಅಕ್ರಮ ಆಸ್ತಿ ಗಳಿಸಿರುವುದು ಪತ್ತೆಯಾಗಿದೆ ಎಂದು ಲೋಕಾಯುಕ್ತ ಎಸ್‌ಪಿ ಟಿ.ಮಲ್ಲೇಶ್‌ ತಿಳಿಸಿದ್ದಾರೆ.ಲೋಕಾಯುಕ್ತ ಡಿವೈಎಸ್‌ಪಿ ಸುರೇಶ ರೆಡ್ಡಿ, ಲೋಕಾಯುಕ್ತ ಪೊಲೀಸ್‌ ಇನ್‌ಸ್ಪೆಕ್ಟರ್‌ ಆನಂದ ವಿ.ಟಕ್ಕನ್ನವರ್‌, ಸಿಬ್ಬಂದಿ ಆನಂದ ಡೋಣಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Share News

About BigTv News

Check Also

ಹಂಪಿ ಎಕ್ಸ್‌ಪ್ರೆಸ್ ರೈಲಿಗೆ ಆಕಸ್ಮಿಕ ಬೆಂಕಿ

ಬಳ್ಳಾರಿ : ಹಂಪಿ ಎಕ್ಸ್‌ಪ್ರೆಸ್ ರೈಲಿನ ಬೋಗಿಯೊಂದರಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಟು ಆತಂಕ ಸೃಷ್ಟಿಯಾದರೂ, ಅನಾಹುತ ಸಂಭವಿಸದೇ ಪ್ರಯಾಣಿಕರು ಪಾರಾದ …

Leave a Reply

Your email address will not be published. Required fields are marked *